ಹಾವೇರಿ | ಶಿಗ್ಗಾವಿ :
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹನುಮರಹಳ್ಳಿಯಲ್ಲಿ ಭಾರೀ ATM ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಹನುಮರಹಳ್ಳಿ ಶಾಖೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ATM ಅನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದರೋಡೆ ನಡೆಸಿದ್ದಾರೆ.
ಅಜ್ಞಾತ ದುಷ್ಕರ್ಮಿಗಳು ಗ್ಯಾಸ್ ಕಟರ್ ಬಳಸಿ ATM ಯಂತ್ರವನ್ನು ಕಟ್ ಮಾಡಿ, ಸುಮಾರು 5 ಲಕ್ಷ ರೂಪಾಯಿಗೂ ಹೆಚ್ಚು ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ದರೋಡೆ ಬಳಿಕ ಗುರುತು ಸಿಗದಂತೆ ಸಿಸಿಟಿವಿ ಕ್ಯಾಮೆರಾಗಳಿಗೆ ಬಿಳಿ ಬಣ್ಣ ಸಿಂಪಡಿಸಿ ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಶಿಗ್ಗಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡದ ಮೂಲಕ ತನಿಖೆ ಮುಂದುವರಿಸಲಾಗಿದೆ. ATM ದರೋಡೆ ಪ್ರಕರಣದಿಂದಾಗಿ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
0 Comments