ದಾವಣಗೆರೆ : ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಇಂದು ನಾಮಪತ್ರ ಸಲ್ಲಿಸಿದರು.
ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಸ್ಥಿತರಿದ್ದು ಬೆಂಬಲ ಸೂಚಿಸಿದರು.
ಸಮರ್ಥ್ ಶಾಮನೂರು ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷವು ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡುವ ಪರಂಪರೆಯನ್ನು ಅನುಸರಿಸುತ್ತಿದ್ದು, ದಾವಣಗೆರೆಯಲ್ಲಿ ಸಮರ್ಥ್ ಅವರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಇನ್ನೊಂದೆಡೆ, ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿದ್ದರೂ, ಹೈಕಮಾಂಡ್ ಸಮರ್ಥ್ ಅವರಿಗೆ ಟಿಕೆಟ್ ನೀಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಈ ಹಿನ್ನೆಲೆ ಸಚಿವ ಜಮೀರ್ ಅಹಮದ್ ಖಾನ್ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಗೈರಾಗಿರುವುದು ಗಮನಾರ್ಹವಾಗಿದೆ.

0 Comments