ನಾಗರಬಾವಿಯಲ್ಲಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ ಹಾಗೂ ಆರ್ಥಿಕ ಸಹಾಯ

 


ಬೆಂಗಳೂರು: ಅಮೇರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದ ಇಂಧನ ಸರಬರಾಜಿನಲ್ಲಿ ಉಂಟಾಗಿರುವ ತೊಂದರೆ ಹಿನ್ನೆಲೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಇದರ ಪರಿಣಾಮವಾಗಿ ದಿನನಿತ್ಯದ ಜೀವನ ನಡೆಸುತ್ತಿರುವ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.


ಈ ಪರಿಸ್ಥಿತಿಯನ್ನು ಮನಗಂಡು ಮಂಡ್ಯ ಕ್ಷೇತ್ರದ ಶಾಸಕರಾದ ರವಿಕುಮಾರ್ ಗೌಡ ಅವರು ಇಂದು ಬೆಂಗಳೂರಿನ ನಾಗರಬಾವಿಯಲ್ಲಿ ಆಟೋ ಚಾಲಕರಿಗೆ ದಿನಸಿ ಕಿಟ್ ಹಾಗೂ ಆರ್ಥಿಕ ಸಹಾಯವನ್ನು ವಿತರಿಸಿದರು.

                                          

ಇದು ಸಹಾಯಧನ ವಿತರಣೆಯ ಎರಡನೇ ಹಂತವಾಗಿದ್ದು, ಮಂಡ್ಯ ತಾಲೂಕಿನ ಮೂಲದವರು ಬೆಂಗಳೂರಿನಲ್ಲಿ ಆಟೋ ಚಾಲಕರಾಗಿ ಜೀವನ ನಡೆಸುತ್ತಿರುವ ಹಲವರಿಗೆ ಈ ನೆರವು ನೀಡಲಾಯಿತು. ಆಹಾರ ಸಾಮಗ್ರಿಗಳ ಕಿಟ್ ಜೊತೆಗೆ ನೇರ ಆರ್ಥಿಕ ಸಹಾಯವೂ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸಂಕಷ್ಟದ ಸಮಯದಲ್ಲಿ ಸಾಮಾನ್ಯ ಜನರ ಜೊತೆ ನಿಲ್ಲುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿಯೂ ಅಗತ್ಯವಿರುವವರಿಗೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಸಮಾಜಸೇವಕರು ಹಾಗೂ ಆಟೋ ಚಾಲಕರ ಸಂಘದ ಪ್ರತಿನಿಧಿಗಳು ಭಾಗವಹಿಸಿದ್ದರು.





Post a Comment

0 Comments